Saturday, June 6, 2026
Homeಕರಾವಳಿಮಂಗಳೂರು : ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಢಿಕ್ಕಿ : ಮೊಟ್ಟೆಗಳೆಲ್ಲಾ ಒಡೆದು ರಸ್ತೆಯಲ್ಲೇ ಚೆಲ್ಲಾಪಿಲ್ಲಿ

ಮಂಗಳೂರು : ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಢಿಕ್ಕಿ : ಮೊಟ್ಟೆಗಳೆಲ್ಲಾ ಒಡೆದು ರಸ್ತೆಯಲ್ಲೇ ಚೆಲ್ಲಾಪಿಲ್ಲಿ

- Advertisement -
- Advertisement -

ಮಂಗಳೂರು : ಬಸ್ಸೊಂದು ಓವರ್ ಟೇಕ್ ಮಾಡುವ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೊಟ್ಟೆಗಳೆಲ್ಲಾ ಒಡೆದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಇಂದು ಬೆಳಗ್ಗೆ ಮಂಗಳೂರಿನ ವೆಲೆನ್ಸಿಯಾದಲ್ಲಿ ನಡೆದಿದೆ.

ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ಸುಮಾರು 15 ಅಡಿಗಳಷ್ಟು ದೂರ ತಳ್ಳಲ್ಪಟ್ಟಿದ್ದು, ಮೊಟ್ಟೆಗಳೆಲ್ಲ ಒಡೆದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಎರಡು ಖಾಸಗಿ ಬಸ್ ಗಳು ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಓವರ್ ಟೇಕ್ ಮಾಡಲು ಮುಂದಾಗಿವೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿ ಅಂಗಡಿಗೆ ಮೊಟ್ಟೆ ಪೂರೈಕೆ ಮಾಡುತ್ತಿದ್ದ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಆ ವಾಹನದಲ್ಲಿದ್ದ ಮೊಟ್ಟೆಗಳಲ್ಲಾ ಒಡೆದು ಹೋಗಿದ್ದು, ರಸ್ತೆಯಲ್ಲಿ ಮೊಟ್ಟೆಯ ಲೋಳೆ ನೀರಿನಂತೆ ಹರಿದಿದೆ.

ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ಎದುರಿದ್ದ ಗೂಡ್ಸ್ ಟೆಂಪೊ ಹಾಗೂ ಬೈಕೊಂದಕ್ಕೂ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಅಪಘಾತಕ್ಕೆ ಕಾರಣವಾದ ಬಸ್ಸನ್ನು ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!