Friday, June 5, 2026
Homeತಾಜಾ ಸುದ್ದಿನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ; ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ದಕ್ಷಿಣ ಭಾರತದ ಇಬ್ಬರು...

ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ; ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ದಕ್ಷಿಣ ಭಾರತದ ಇಬ್ಬರು ಸ್ಟಾರ್ ನಟರು

- Advertisement -
- Advertisement -

ಬೆಂಗಳೂರು : ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಸಮಾರಂಭಕ್ಕೆ ದಕ್ಷಿಣ ಭಾರತದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭಕ್ಕೆ ಇಬ್ಬರು ಸ್ಟಾರ್ ನಟು ಅತಿಥಿಗಳಾಗಿ ಆಗಮಿಸಲಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅವರಿಗೆ ಕರ್ನಾಟಕ ಸರಕಾರವು ಆಹ್ವಾನ ನೀಡಿದ್ದು, ಜ್ಯೂನಿಯರ್ ಎನ್.ಟಿ.ಆರ್ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ರಜನಿಕಾಂತ್ ಅವರ ಒಪ್ಪಿಗೆ ಪತ್ರ ಇನ್ನಷ್ಟೇ ಸಿಗಬೇಕಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!