Saturday, June 6, 2026
Homeಕರಾವಳಿಉಡುಪಿಉಡುಪಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಯುವಕ ಸ್ಥಳದಲ್ಲೇ ಸಾವು

ಉಡುಪಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಯುವಕ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ  ಸಂಭವಿಸಿ  ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಉಡುಪಿಯ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಇಂದು ಮಧ್ಯಾಹ್ನ ನಡೆದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ನಿವಾಸಿ ಸ್ಟ್ಯಾಲಿನ್(18) ಮೃತ ದುರ್ದೈವಿ.  

ಈತ ಇಂದು ಮಧ್ಯಾಹ್ನ ಹಿರಿಯಡಕ ಪೇಟೆಯಿಂದ ಪುತ್ತಿಗೆ ಕಡೆಗೆ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಸ್ಕೋಡಾ ಕಾರೊಂದು ಡಿಕ್ಕಿಯಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಸ್ಟ್ಯಾಲಿನ್ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ‌. ಇದೇ ಸಂದರ್ಭದಲ್ಲಿ ಸ್ಟ್ಯಾಲಿನ್ ನ ಹಿಂದಿನಿಂದ ಬರುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು, ರಸ್ತೆಯ ಬದಿಯ ಪೊದೆಗೆ ನುಗ್ಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!