Thursday, June 4, 2026
Homeತಾಜಾ ಸುದ್ದಿ3000 ಹಿರಿಯ ಸಾಹಿತಿಗಳು ಹಾಗೂ ಕಲಾವಿದರಿಗೆ ಮಾಸಾಶನ ಮಂಜೂರು

3000 ಹಿರಿಯ ಸಾಹಿತಿಗಳು ಹಾಗೂ ಕಲಾವಿದರಿಗೆ ಮಾಸಾಶನ ಮಂಜೂರು

- Advertisement -
- Advertisement -

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 3000 ಅರ್ಹ ಹಿರಿಯ ಸಾಹಿತಿ ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದೆ.

2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಕಷ್ಟ ಪರಿಸ್ಥಿತಿಯಲ್ಲಿರುವ 3000 ಹಿರಿಯ ಸಾಹಿತಿ ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದೆ.

ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 2000 ರೂಪಾಯಿ ಮಾಸಾಶನ ಮಂಜೂರು ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ವಲಯದಲ್ಲಿ ಗಣನೀಯ ಸೇವೆ ಸಲ್ಲಿಸಿ ಪ್ರಸ್ತುತ ಕಷ್ಟದ ಪರಿಸ್ಥಿತಿಯಲ್ಲಿರುವ 3000 ಕಲಾವಿದರಿಗೆ ಮಾಸಾಶನ ಮಂಜೂರು ಮಾಡುವಂತೆ ಶ್ರೀನಿವಾಸ ಮೈಸೂರು ನೇತೃತ್ವದ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿತ್ತು.

- Advertisement -

Latest News

error: Content is protected !!