Saturday, June 6, 2026
Homeಕರಾವಳಿಕಡಬ: ಕಾರು ಹಾಗೂ ಜೀಪ್ ನಡುವೆ ಅಪಘಾತ; ನಾಲ್ವರಿಗೆ ಗಂಭೀರ ಗಾಯ

ಕಡಬ: ಕಾರು ಹಾಗೂ ಜೀಪ್ ನಡುವೆ ಅಪಘಾತ; ನಾಲ್ವರಿಗೆ ಗಂಭೀರ ಗಾಯ

- Advertisement -
- Advertisement -

ಕಡಬ: ಕಾರು ಹಾಗೂ ಜೀಪ್ ನಡುವೆ ಅಪಘಾತ  ಸಂಭವಿಸಿ  ನಾಲ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು  ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ.

ಘಟನೆಯಲ್ಲಿ ಜೀಪಿ‌ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

- Advertisement -

Latest News

error: Content is protected !!