Thursday, June 4, 2026
Homeಕರಾವಳಿಪುತ್ತೂರು: ಕೋರ್ಟ್ ಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಆರೋಪಿಯ ಬಂಧನ

ಪುತ್ತೂರು: ಕೋರ್ಟ್ ಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ಕೋರ್ಟ್ ಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಕೊಲೆ ಯತ್ನ ಪ್ರಕರಣದ 2ನೇ ಆರೋಪಿಯಾಗಿರುವ ಪೋಳ್ಯ ನಿವಾಸಿ ಇರ್ಷಾದ್  ನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 143,147,148,341,504,323,324,326,307 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಪೋಳ್ಯ ನಿವಾಸಿ ಇರ್ಷಾದ್ ಪ್ರಕರಣದ ನಂತರ ದುಬೈಗೆ ತೆರಳಿ ತಲೆಮರೆಸಿಕೊಡಿದ್ದನು. ಇದೀಗ ದುಬೈಯಿಂದ ಮರಳಿ ಬಂದ ವೇಳೆ ಮಂಗಳೂರು ಬಜಪೆ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ವಾರೆಂಟಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನವೆಂಬರ್ 10ರ ತನಕ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!