Friday, June 5, 2026
Homeಕರಾವಳಿನದಿಯಲ್ಲಿ ಈಜಲು ಹೋದ ವ್ಯಕ್ತಿಯ ಮೇಲೆ ಮೊಸಳೆಗಳ ದಾಳಿ

ನದಿಯಲ್ಲಿ ಈಜಲು ಹೋದ ವ್ಯಕ್ತಿಯ ಮೇಲೆ ಮೊಸಳೆಗಳ ದಾಳಿ

- Advertisement -
- Advertisement -

ಕಾರವಾರ: ಈಜಲು ಹೋದ ವ್ಯಕ್ತಿಯ ಮೇಲೆ ಮೊಸಳೆ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಇಂದು ಬೆಳಗ್ಗೆ ನಡೆದಿದೆ. ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯನ್ನು ಎರಡು ಮೊಸಳೆಗಳು ಎಳೆದೊಯ್ದಿವೆ.

ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರಿ ದಾಸ್ ಎಂಬಾತ ಬೆಳಗ್ಗೆ ಕಾಳಿ ನದಿಯಲ್ಲಿ ಈಜಲು ತೆರಳಿದ್ದ. ದಂಡೆಯ ಮೇಲೆ ಚಪ್ಪಲಿ, ಬಟ್ಟೆಯನ್ನು ಇಟ್ಟು ನದಿಯಲ್ಲಿ ಇಳಿದಿದ್ದಾನೆ. ಈ ವೇಳೆ 2 ಮೊಸಳೆಗಳು ಈತನ ಮೇಲೆ ದಾಳಿ ನಡೆಸಿ ಹೊತ್ತೊಯ್ದಿದೆ. ಇದನ್ನು ಸ್ಥಳೀಯ ಜನರು ನೋಡಿ ಘಟನೆಗೆ ಸಂಬಂಧಿಸಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವ್ಯಕ್ತಿಯ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ.

- Advertisement -

Latest News

error: Content is protected !!