Saturday, June 6, 2026
Homeಕರಾವಳಿಮಂಗಳೂರು: ಯಕ್ಷಗಾನ ಕಾಲಮಿತಿ ಪ್ರದರ್ಶನ ವಿರೋಧಿಸಿ ಕಟೀಲಿಗೆ ಪಾದಯಾತ್ರೆ

ಮಂಗಳೂರು: ಯಕ್ಷಗಾನ ಕಾಲಮಿತಿ ಪ್ರದರ್ಶನ ವಿರೋಧಿಸಿ ಕಟೀಲಿಗೆ ಪಾದಯಾತ್ರೆ

- Advertisement -
- Advertisement -

ಮಂಗಳೂರು: ಕಟೀಲು ಯಕ್ಷಗಾನ ಮೇಳಗಳ ಕಾಲಮಿತಿ ಪ್ರದರ್ಶನ ಹಿಂಪಡೆದು, ರಾತ್ರಿಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನಗೊಳ್ಳಬೇಕು ಎಂದು ಆಗ್ರಹಿಸಿ ಪಾದಯಾತ್ರೆಗೆ ನಿರ್ಧರಿಸಲಾಗಿದೆ ಎಂದು ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ಸಂಚಾಲಕ ಅಶೋಕ ಕೃಷ್ಣಾಪುರ ತಿಳಿಸಿದ್ದಾರೆ.

ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಮತ್ತು ಖಾಯಂ ಸೇವಾದಾರರ ಒಕ್ಕೂಟವಾದ ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ದಕ್ಷಿಣ ಕನ್ನಡ ಮತ್ತು ಉಡುಪಿ ವತಿಯಿಂದ ನ. 6ರಂದು ಪಾದಯಾತ್ರೆ ನಡೆಸಲು ಸಜ್ಜಾಗಿದೆ. ಬೆಳಗ್ಗೆ 8.30ರಿಂದ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಸಮನ್ವಯ ಸಮಿತಿ ಸಂಚಾಲಕ ಅಶೋಕ ಕೃಷ್ಣಾಪುರ ತಿಳಿಸಿದ್ದಾರೆ.

- Advertisement -

Latest News

error: Content is protected !!