Sunday, June 7, 2026
Homeಕರಾವಳಿದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು: ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯವೇ ಅಲ್ಲ: ಬಿ.ಟಿ.ಲಲಿತಾ...

ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು: ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯವೇ ಅಲ್ಲ: ಬಿ.ಟಿ.ಲಲಿತಾ ನಾಯ್ಕ್‌ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಹುಬ್ಬಳ್ಳಿ: ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ಮಾಸಾಶನ ನೀಡಬಾರದಿತ್ತು. ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾನಾಯ್ಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಖಾಸಗೀ ವಾಹಿನಿಯೊಂದರ ಜೊತೆ ಮಾತನಾಡಿದ ಅವರು, ರಿಷಬ್ ಶೆಟ್ಟಿ ಒಬ್ಬ ವಿಚಾರವಾದಿ‌. ಆತ ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡೆಸಿಕೊಳ್ಳಲು ತಯಾರಿಲ್ಲ. ಸತ್ಯವನ್ನು ನೇರವಾಗಿ ಹೇಳಿದರೇ ಆತನನ್ನು ಕೊಂದ ಹಾಕುತ್ತಾರೆ, ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕಬೇಕು ಅಂತ ಬಹಳಷ್ಟು ಬುದ್ದಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ. ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!