- Advertisement -
- Advertisement -
ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
ಈ ಕುರಿತ ಅರ್ಜಿ ವಿಚಾರಣೆ ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.ಮುಂದಿನ ವಿಚಾರಣೆ 2023 ರ ಜನವರಿ ಮೊದಲ ವಾರಕ್ಕೆ ಮುಂದೂಡಲಾಗಿದೆ.
- Advertisement -