Sunday, June 7, 2026
Homeತಾಜಾ ಸುದ್ದಿಮುರುಘಾ ಮಠದ 47 ಮಹತ್ವದ ಫೋಟೋ ಕಳವು ಪ್ರಕರಣ: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಬಂಧನ

ಮುರುಘಾ ಮಠದ 47 ಮಹತ್ವದ ಫೋಟೋ ಕಳವು ಪ್ರಕರಣ: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಬಂಧನ

- Advertisement -
- Advertisement -

ಚಿತ್ರದುರ್ಗ: ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ದಸರಾ ಉತ್ಸವದ ಅಂಗವಾಗಿ ನಡೆದ ಪೀಠಾರೋಹಣದ ಹಿಂದಿನ ದಿನ ಅ.5ರ ಮಧ್ಯರಾತ್ರಿ ವೇಳೆ ರಾಜಾಂಗಣದಲ್ಲಿ ಗೋಡೆಗೆ ಹಾಕಿದ್ದ 47 ಫೋಟೋಗಳು ಕಳ್ಳತನವಾಗಿದ್ದವು. ಧಾರ್ಮಿಕ ಮುಖಂಡರು, ರಾಷ್ಟ್ರಪತಿ, ಪ್ರಧಾನಿ, ಹಾಗೂ ರಾಜ್ಯದ ಸಿಎಂಗಳ ಜೊತೆಗಿನ ಮುರುಘಾಶ್ರೀ ಫೋಟೋಗಳನ್ನು ಕಳ್ಳರು ಕದ್ದೊಯ್ದಿದ್ದರು. ಆ ಬಳಿಕ ವಿಚಾರಣೆ ಆರಂಭಿಸಿದ ಪೊಲೀಸರು ನ.7ರಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಬಸವರಾಜನ್ ಫೋಟೋವನ್ನು ಕಳವು ಮಾಡುವಂತೆ ಪ್ರಚೋದನೆ ನೀಡಿದ್ದರು ಎಂಬ ಸತ್ಯ ಒಪ್ಪಿಕೊಂಡಿದ್ದರು. ಹಾಗಾಗಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ

- Advertisement -

Latest News

error: Content is protected !!