Thursday, June 4, 2026
Homeಕರಾವಳಿಮಂಗಳೂರು: ನ.19 ಮತ್ತು 20ರಂದು ಕನ್ನಡ ಶಾಲಾ ಮಕ್ಕಳ ಹಬ್ಬ

ಮಂಗಳೂರು: ನ.19 ಮತ್ತು 20ರಂದು ಕನ್ನಡ ಶಾಲಾ ಮಕ್ಕಳ ಹಬ್ಬ

- Advertisement -
- Advertisement -

ಮಂಗಳೂರು: ಕೇಶವ ಸ್ಮೃತಿ ಸಂವರ್ಧನ ಸಮಿತಿಯು ಮಂಗಳೂರಿನ ಸಂಘನಿಕೇತನದಲ್ಲಿ ನವೆಂಬರ್ 19 ಮತ್ತು 20ರಂದು ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ಆಯೋಜಿಸಲಾಗಿದೆ.

ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ವೃದ್ಧಿ ಹಾಗೂ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕನ್ನಡ ಶಾಲಾ ಮಕ್ಕಳ ಹಬ್ಬದ ಸ್ವಾಗತ ಸಮಿತಿಯ ಅಧ್ಯಕ್ಷ ಡಾ. ಮೋಹನ ಆಳ್ವ, ಎರಡು ದಿನಗಳ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ 5ನೇ ತರಗತಿ ಮೇಲ್ಪಟ್ಟ 10ನೇ ತರಗತಿ ತನಕದ (ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ) 15,000 ವಿದ್ಯಾರ್ಥಿಗಳು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

- Advertisement -

Latest News

error: Content is protected !!