Tuesday, June 9, 2026
Homeಕರಾವಳಿಮಂಗಳೂರು: ನ.19 ರಂದು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಮಂಗಳೂರು: ನ.19 ರಂದು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

- Advertisement -
- Advertisement -

ಮಂಗಳೂರು: ನ.19 ರಂದು ಮಂಗಳೂರಿನಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಅದ್ದೂರಿಯಾಗಿ ಲೋಕಾರ್ಪಣೆಯಾಗಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ತಿಳಿಸಿದರು.

ಈ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ವೇದವ್ಯಾಸ ಕಾಮತ್, ಕೆದಂಬಾಡಿ ರಾಮಯ್ಯ ಗೌಡರ ಹೋರಾಟವನ್ನು ಶಾಶ್ವತವಾಗಿ ಭಾರತದ ಇತಿಹಾಸ ಪುಟಗಳಲ್ಲಿ ದಾಖಲಿಸಿ ಸ್ಮಾರಕ ನಿರ್ಮಾಣದ ಮೂಲಕ ಅವರ ಹೆಸರನ್ನು ಈ ನಾಡಿನಲ್ಲಿ ಶಾಶ್ವತವಾಗಿ ಉಳಿಸಲು ಮಂಗಳೂರಿನ ಚಾರಿತ್ರಿಕ ಸ್ಥಳವಾದ ಬಾವುಟಗುಡ್ಡೆಯಲ್ಲಿ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ನ.19ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಮಹಾ ಸ್ವಾಮೀಜಿಯವರು ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.

- Advertisement -

Latest News

error: Content is protected !!