Thursday, June 4, 2026
Homeಕರಾವಳಿಯೂಟ್ಯೂಬ್​, ಮ್ಯೂಸಿಕ್ ಆ್ಯಪ್​ಗಳಿಂದ ‘ವರಾಹ ರೂಪಂ’ ಹಾಡು ಡಿಲೀಟ್

ಯೂಟ್ಯೂಬ್​, ಮ್ಯೂಸಿಕ್ ಆ್ಯಪ್​ಗಳಿಂದ ‘ವರಾಹ ರೂಪಂ’ ಹಾಡು ಡಿಲೀಟ್

- Advertisement -
- Advertisement -

ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ಕಾಪಿ ಮಾಡಲಾಗಿದೆ ಎನ್ನುವ ವಿಚಾರ ಹಲವು ದಿನಗಳಿಂದ ಸದ್ದು ಮಾಡುತ್ತಿದೆ. ನಮ್ಮ ಹಾಡನ್ನು ಕಾಪಿ ಮಾಡಲಾಗಿದೆ ಎಂದು ಮಲಯಾಳಂ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ಕಂಪನಿಯು ಹೇಳಿತ್ತು. ನ್ಯಾಯಾಲಯಕ್ಕೂ ದೂರು ಸಲ್ಲಿಕೆಯಾಗಿತ್ತು. ಹಾಡನ್ನು ಪ್ರಸಾರ ಮಾಡದಂತೆ ಕೇರಳದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿತ್ತು. ಈಗ ಈ ಆದೇಶಕ್ಕೆ ಚಿತ್ರತಂಡ ತಲೆಬಾಗಿದೆ. ಯೂಟ್ಯೂಬ್, ಮ್ಯೂಸಿಕ್ ಆ್ಯಪ್​ಗಳಾದ ‘ಸಾವನ್..’ ಮೊದಲಾದ ಪ್ಲಾಟ್​ಫಾರ್ಮ್​ಗಳಿಂದ ಈ ಸಾಂಗ್ ಡಿಲೀಟ್ ಮಾಡಲಾಗಿದೆ.

ವರಾಹ ರೂಪಂ..’ ಹಾಡನ್ನು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ‘ಹೊಂಬಾಳೆ ಫಿಲ್ಮ್ಸ್​’ ಯೂಟ್ಯೂಬ್ ಚಾನೆಲ್​ಗಳಲ್ಲಿ ಅಪ್​ಲೋಡ್ ಮಾಡಲಾಗಿತ್ತು. ಈಗ ‘ಹೊಂಬಾಳೆ ಫಿಲ್ಮ್ಸ್​’ ಯೂಟ್ಯೂಬ್ ಚಾನೆಲ್​ನಿಂದ ಈ ಹಾಡನ್ನು ಡಿಲೀಟ್ ಮಾಡಲಾಗಿದೆ. ಮ್ಯೂಸಿಕ್ ಆ್ಯಪ್​ ಜಿಯೊ ಸಾವನ್​​ನಲ್ಲಿ ಈ ಹಾಡು ಕೇಳಲು ಲಭ್ಯವಿಲ್ಲ.

- Advertisement -

Latest News

error: Content is protected !!