Thursday, June 4, 2026
Homeತಾಜಾ ಸುದ್ದಿಜಮ್ಮು-ಕಾಶ್ಮೀರದಲ್ಲಿ ಸೇನೆಯಿಂದ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಸೇನೆಯಿಂದ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ

- Advertisement -
- Advertisement -

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ ಕೌಂಟರ್ ಗಳು ಮುಂದುವರಿಯುತ್ತಿದ್ದು ಶನಿವಾರ ಬೆಳಗ್ಗೆ 4 ಉಗ್ರರನ್ನು ಹತ್ಯೆಗೈಯುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.

ಕಾಶ್ಮೀರದ ಕುಲ್ಗಾಮ್ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ನಾಲ್ಕು ಮಂದಿ ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಭಾರತೀಯ ಸೇನೆ, ಸಿಆರ್ ಪಿಎಫ್ ಯೋಧರು ಮತ್ತು ಸ್ಥಳೀಯ ಪೊಲೀಸರು ಕಾರ್ಯಾಚರಣೆಯಲ್ಲಿ ಫಾಲ್ಗೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಮಧ್ಯರಾತ್ರಿಯ ವೇಳೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಬೆಳಗ್ಗಿನ ಜಾವ ಉಗ್ರರನ್ನು ಹೊಡೆದುರುಳಿಸಿದೆ.

ಕುಲ್ಗಾಮ್ ಜಿಲ್ಲೆಯ ನಿಪೊರಾ ಪ್ರದೇಶದಲ್ಲಿ ಎನ್ ಕೌಂಟರ್ ಇಂದು ನಸುಕಿನ ಜಾವ ಆರಂಭವಾಯಿತು. ಅದರಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಭಾರತೀಯ ಸೇನೆ ಯೋಧರು ಹತ್ಯೆಗೈದಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಲಲ್ಲಾನ್ ಎಂಬಲ್ಲಿ ಕೂಡ ಇಂದು ನಸುಕಿನ ಜಾವ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಪೊಲೀಸರು ಹತ್ಯೆಗೈದಿದ್ದಾರೆ.

- Advertisement -

Latest News

error: Content is protected !!