Monday, June 8, 2026
Homeಕರಾವಳಿಬೆಳ್ತಂಗಡಿ: ಟೆಂಪೋ  ಚರಂಡಿಗೆ  ಬಿದ್ದು ಹಲವರಿಗೆ ಗಾಯ

ಬೆಳ್ತಂಗಡಿ: ಟೆಂಪೋ  ಚರಂಡಿಗೆ  ಬಿದ್ದು ಹಲವರಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ: ಟೆಂಪೋವೊಂದು  ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವರಿಗೆ ಗಾಯಗಳಾದ ಘಟನೆ ಕೌಕ್ರಾಡಿ ಗ್ರಾಮದಲ್ಲಿ  ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ಚರಂಡಿಗೆ ಬಿದ್ದಿದೆ. ಈ ವೇಳೆ ವಾಹನದಲ್ಲಿದ್ದ ಸುಮಾರು 8 ಮಂದಿಗೆ ಗಾಯಗಳಾಗಿದ್ದು ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಕೊಕ್ಕಡದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ .ಅಲ್ಲಿಂದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

- Advertisement -

Latest News

error: Content is protected !!