Wednesday, June 3, 2026
Homeಕರಾವಳಿಉಡುಪಿಪಡುಬಿದ್ರೆ: ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಮದುವೆ ನಿಶ್ಚಯವಾಗಿದ್ದ ಯುವತಿ ಸಾವು

ಪಡುಬಿದ್ರೆ: ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಮದುವೆ ನಿಶ್ಚಯವಾಗಿದ್ದ ಯುವತಿ ಸಾವು

- Advertisement -
- Advertisement -

ಪಡುಬಿದ್ರೆ: ಬೈಕ್‌ ಗೆ ಟಿಪ್ಪರ್‌ ಡಿಕ್ಕಿ ಹೊಡೆದು ಬೈಕ್‌ ನಲ್ಲಿದ್ದ ಸಹಸವಾರೆ ಯುವತಿ ಮೃತಪಟ್ಟ ಘಟನೆ ಉಚ್ಚಿಲದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಪಡುಬಿದ್ರೆಯ ಕಂಚಿನಡ್ಕ ನಿವಾಸಿ ನಿಹಾಳ ಮೃತಪಟ್ಟ ಯುವತಿ. ಘಟನೆಯಲ್ಲಿ ಬೈಕ್‌ ಸವಾರ ಕೂಡಾ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮೃತ ಯುವತಿಗೆ ಮದುವೆ ನಿಶ್ಚಯವಾಗಿತ್ತು ಎನ್ನಲಾಗಿದೆ. ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!