Friday, June 5, 2026
Homeಕರಾವಳಿನವೆಂಬರ್ 19 ರಂದು ಮಂಗಳೂರಿನಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಅನಾವರಣ

ನವೆಂಬರ್ 19 ರಂದು ಮಂಗಳೂರಿನಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಅನಾವರಣ

- Advertisement -
- Advertisement -

ಮಂಗಳೂರು: 1837 ರ ಅಮರ ಸುಳ್ಯದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸ್ವಾತಂತ್ರ್ಯ ವೀರ ಹುತಾತ್ಮ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ನವೆಂಬರ್ 19 ರಂದು ಮಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಮಂಗಳೂರಿನ ಬಾವುಟಗುಡ್ಡೆಯಲ್ಲಿ ಬೆಳಗ್ಗೆ 9.30ಕ್ಕೆ‌ ಶೌರ್ಯದ ಪ್ರತಿಮೆ ಅನಾವರಣಗೊಳ್ಳಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭಾಗವಹಿಸಲಿದ್ದಾರೆ.

ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಬಾವುಟಗುಡ್ಡೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ‌

- Advertisement -

Latest News

error: Content is protected !!