Thursday, June 4, 2026
Homeಕರಾವಳಿಮಂಗಳೂರು ಮಹಾನಗರ ಪಾಲಿಕೆಯ 4 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆಯ 4 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ

- Advertisement -
- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನಾಲ್ಕು ಕೋಟಿ ರೂಪಾಯಿಗಳ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಬಾಂದೊಟ್ಟು ದೈವಸ್ಥಾನದ ಬಳಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ, 2.50 ಕೋಟಿ ರೂಪಾಯಿ ವೆಚ್ಚದಲ್ಲಿ ಆದಿತ್ಯನಗರ ಹಾಗೂ ಲಕ್ಷ್ಮಿ ನಗರದಲ್ಲಿ ರಸ್ತೆ ಅಭಿವೃದ್ಧಿ, 1 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಂದೊಟ್ಟುಗುತ್ತು ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನಡೆಸಲಾಗಿದೆ.

ಒಟ್ಟು 4 ಕೋಟಿ ವೆಚ್ಚದ ಕಾಮಗಾರಿಗಳಿಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಶಂಕುಸ್ಥಾಪನೆ ನೆರವೇರಿಸಿದರು.

- Advertisement -

Latest News

error: Content is protected !!