Friday, August 21, 2026
Homeತಾಜಾ ಸುದ್ದಿವೇದಿಕೆಯಲ್ಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

ವೇದಿಕೆಯಲ್ಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

- Advertisement -
- Advertisement -

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆಂದು ತಿಳಿದುಬಂದಿದೆ.

ಶಿವಮಂದಿರದಿಂದ ಸೇವಕ್ ಕಂಟೋನ್ಮೆಂಟ್ ವರೆಗಿನ ರಸ್ತೆಯ ಶಂಕು ಸ್ಥಾಪನೆ ಮಾಡಲು ಕೇಂದ್ರ ಸಚಿವರು ಸಿಲಿಗುರಿಗೆ ಬಂದಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರು ವೇದಿಕೆ ಮೇಲೆ ಕುಳಿತಿದ್ದರು. ಆಗ ಏಕಾಏಕಿ ಅನಾರೋಗ್ಯಕ್ಕೀಡಾದರು. ಕೂಡಲೇ ವೇದಿಕೆಯ ಹಿಂದಿನ ಗ್ರೀನ್ ರೂಮ್‍ಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಿಲಿಗುರಿಯಿಂದ ಗ್ರೀನ್ ಕಾರಿಡಾರ್ ಮೂಲಕ ಓರ್ವ ವೈದರನ್ನು ಕರೆಸಿ ಆರೋಗ್ಯ ತಪಾಸಣೆ ನಡೆಸಲಾಯಿತು. 

- Advertisement -

Latest News

error: Content is protected !!