Saturday, June 6, 2026
Homeಕರಾವಳಿಕಾಂತಾರ ಸಿನಿಮಾ ನೋಡಿ ಭಾವುಕನಾಗಿಬಿಟ್ಟೆ: ಸುನಿಲ್‌ ಶೆಟ್ಟಿ

ಕಾಂತಾರ ಸಿನಿಮಾ ನೋಡಿ ಭಾವುಕನಾಗಿಬಿಟ್ಟೆ: ಸುನಿಲ್‌ ಶೆಟ್ಟಿ

- Advertisement -
- Advertisement -

ಕಾಂತಾರ ಸಿನಿಮಾದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದೀಗ ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ಕೂಡಾ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ಕಾಂತಾರ ಸಿನಿಮಾ ನೋಡಿದೆ. ನನಗೆ ಅರಿವಿಲ್ಲದಂತೆ ಕಣ್ಣೀರು ಬಂತು. ತುಂಬಾ ಭಾವುಕನಾಗಿಬಿಟ್ಟೆ. ಯಾಕೆಂದರೆ, ನಾನು ಆ ನೆಲದವನು. ಅಲ್ಲಿ ಹುಟ್ಟಿ ಬೆಳೆದವನು. ಹಾಗಾಗಿ ಕಾಂತಾರ ಸಿನಿಮಾ ನನಗೆ ಬೇಗ ಕನೆಕ್ಟ್ ಆಯಿತು’ ಎಂದು ಮಾತನಾಡಿದ್ದಾರೆ. ರಿಷಬ್ ಶೆಟ್ಟಿ ಅವರ ನಿರ್ದೇಶನ ಹಾಗೂ ನಟನೆಯ ಬಗ್ಗೆಯೂ ಕೊಂಡಾಡಿದ್ದಾರೆ.

- Advertisement -

Latest News

error: Content is protected !!