Saturday, June 13, 2026
Homeಕರಾವಳಿಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

- Advertisement -
- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಇಂದು ಬೆಳಗ್ಗೆ ನಡೆದ ಶಂಕುಸ್ಥಾಪನೆ ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ವಹಿಸಿದ್ದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗೂ ಸುರಪುರ ಶಾಸಕ ರಾಜೂ ಗೌಡ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ಮೋಹನ್ ರಾಜ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ, ‌ ಧರ್ಮಸ್ಥಳ ಗ್ರಾಮ ಪಂಚಾಯತಿ ಅಧ್ಯಕ್ಷರು ಸೇರಿದಂತೆ ಹಲವರು ಶಂಕುಸ್ಥಾಪನೆ ವೇಳೆ ಉಪಸ್ಥಿತರಿದ್ದರು.

- Advertisement -

Latest News

error: Content is protected !!