Thursday, June 4, 2026
Homeಕರಾವಳಿನಾಳೆ ಮಂಗಳೂರಿಗೆ ಗೃಹ ಸಚಿವರ ಭೇಟಿ, ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ

ನಾಳೆ ಮಂಗಳೂರಿಗೆ ಗೃಹ ಸಚಿವರ ಭೇಟಿ, ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ

- Advertisement -
- Advertisement -

ಶಿವಮೊಗ್ಗ: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ‌ ನೀಡಲಿದ್ದಾರೆ.

ಮಂಗಳೂರಿನಲ್ಲಿ ನಾಳೆ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರು ನಡೆಸಲಿದ್ದು, ಸಭೆಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರನ್ನೊಳಗೊಂಡ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಸಭೆಯ ಸ್ಫೋಟದಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಅವರನ್ನೂ ಭೇಟಿಯಾಗಲಿರುವ ಆರಗ ಜ್ಞಾನೇಂದ್ರ ಸಾಂತ್ವನ ಹೇಳಲಿದ್ದಾರೆ. ಶಿವಮೊಗ್ಗದಿಂದ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಆಗಮಿಸಲಿದ್ದಾರೆ.

- Advertisement -

Latest News

error: Content is protected !!