Sunday, June 7, 2026
Homeಕರಾವಳಿಬಂಟ್ವಾಳದಲ್ಲಿ ಬಟ್ಟೆ ವ್ಯಾಪಾರಿ ನಾಪತ್ತೆ

ಬಂಟ್ವಾಳದಲ್ಲಿ ಬಟ್ಟೆ ವ್ಯಾಪಾರಿ ನಾಪತ್ತೆ

- Advertisement -
- Advertisement -

ಬಂಟ್ವಾಳ : ಬಟ್ಟೆ ವ್ಯಾಪಾರಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬಿಮೂಡ ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.  ತಮಿಳುನಾಡಿನ ತಿರುಪ್ಪರ ಜಿಲ್ಲೆ ನಿವಾಸಿ ಬಟ್ಟೆ ವ್ಯಾಪಾರಿ ಸೆಲ್ವಕುಮಾರ್ ನಾಪತ್ತೆಯಾಗಿರುವ ವ್ಯಕ್ತಿ.

ಬಿ ಮೂಡ ಗ್ರಾಮದ ಕೊಡಂಗೆ ಎಂಬಲ್ಲಿನ ಜಯರಾವ್ ಶೆಟ್ಟಿ ಎಂಬವರ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಇವರು, ಬಟ್ಟೆ ಲೈನ್ ಸೇಲ್ ವ್ಯಾಪಾರ ಮಾಡಿಕೊಂಡಿದ್ದರು.

ನ.18 ರಿಂದ ಇವರು ನಾಪತ್ತೆಯಾಗಿರುವುದಾಗಿ ಇವರ ಸಂಬಂಧಿ ರಾಮಸ್ವಾಮಿ‌ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಹುಡುಕಿಕೊಡಿ ಎಂದು ಮನವಿ ಮಾಡಿದ್ದಾರೆ.

ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಿತ್ರದಲ್ಲಿ ಕಾಣುವ ವ್ಯಕ್ತಿಯನ್ನು ಯಾರಾದರೂ ಕಂಡಲ್ಲಿ ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ನೀಡುವಂತೆ ವಿನಂತಿಸಿದ್ದಾರೆ.

ಬಿಮೂಡ ಗ್ರಾಮದ ಕೊಡಂಗೆ ಎಂಬಲ್ಲಿ ವಾಸ್ತವ್ಯವಿದ್ದ ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!