Thursday, September 10, 2026
Homeಕರಾವಳಿಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭದ್ರತೆ ಕೋರಿ ಪೊಲೀಸ್ ಠಾಣೆಗೆ ಇಒ ದೂರು

ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭದ್ರತೆ ಕೋರಿ ಪೊಲೀಸ್ ಠಾಣೆಗೆ ಇಒ ದೂರು

- Advertisement -
- Advertisement -

ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಕದ್ರಿ ಮಂಜುನಾಥೇಶ್ವರ ದೇವಸ್ಥಾನ ಗುರಿಯಾಗಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ದೂರು ದಾಖಲಾಗಿದೆ.

ಕದ್ರಿ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಜಯಮ್ಮ ಕದ್ರಿ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಭಕ್ತರು ಬರುತ್ತಿದ್ದು, ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಸಂಘಟನೆ ದೇವಸ್ಥಾನದ ಮೇಲೆ ಬೆದರಿಕೆ ಹಾಕಿರುವದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಸೂಕ್ತ ಪೊಲೀಸ್ ಭದ್ರತೆಯನ್ನೂ ಒದಗಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.ದೂರು ಸ್ವೀಕರಿಸಿರುವ ಕದ್ರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!