Thursday, June 4, 2026
Homeಕರಾವಳಿಸ್ಫೋಟ ಪ್ರಕರಣದಲ್ಲಿ ಆರೋಪಿ ಶಾರೀಕ್ ಈ ವರೆಗೆ ಹೇಳಿಕೆ ನೀಡಿಲ್ಲ:ಮಂಗಳೂರು ನಗರ ಪೊಲೀಸ್ ಆಯುಕ್ತರ ಸ್ಪಷ್ಟನೆ

ಸ್ಫೋಟ ಪ್ರಕರಣದಲ್ಲಿ ಆರೋಪಿ ಶಾರೀಕ್ ಈ ವರೆಗೆ ಹೇಳಿಕೆ ನೀಡಿಲ್ಲ:ಮಂಗಳೂರು ನಗರ ಪೊಲೀಸ್ ಆಯುಕ್ತರ ಸ್ಪಷ್ಟನೆ

- Advertisement -
- Advertisement -

ಮಂಗಳೂರು: ನಾಗುರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿಯವರೆಗೆ ಯಾವುದೇ ಹೇಳಿಕೆ ಕೊಟ್ಟಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಇಂದು ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಪ್ರತಿಕ್ರಿಯಿಸಿದ ಶಶಿಕುಮಾರ್, ಶಾರೀಕ್ ಗೆ ಬೇರೆ ಬೇರೆ ಟಾರ್ಗೆಟ್ ಇತ್ತು ಎನ್ನುವುದು ಬರೀ ಊಹಾಪೋಹ ಅಷ್ಟೇ, ಈ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

ಆರೋಪಿ ಶಾರೀಕ್ ವಿಚಾರಣೆ ಈವರೆಗೆ ಸಾಧ್ಯವಾಗಿಲ್ಲ ಎಂದು ತಿಳಿಸಿರುವ ಪೊಲೀಸ್ ಆಯುಕ್ತರು, ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಒದಗಿಸಿದ್ದು, ಸುಟ್ಟ ಗಾಯಗಳಿರುವುದರಿಂದ ಸೋಂಕು ತಗುಲುವ ಸಾಧ್ಯತೆ ಇರುವ ಕಾರಣ ಯಾರಿಗೂ ಒಳ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಬಿಗಿ ಭದ್ರತೆಯಲ್ಲಿ ಶಾರೀಕ್ ಗೆ ಚಿಕಿತ್ಸೆ ಮುಂದುವರೆದಿದ್ದು, ಕೊಠಡಿ ಬಳಿ ಇನ್ಸ್ಪೆಕ್ಟರ್ ಹಂತದ ಅಧಿಕಾರಿಯ ನೇತೃತ್ವದಲ್ಲಿ ಭದ್ರತೆ ನೀಡಿದ್ದು, ಆಸ್ಪತ್ರೆಯ ಹೊರ ಭಾಗದಲ್ಲಿ ಸಿಎಆರ್ ತುಕಡಿ ನಿಯೋಜಿಸಲಾಗಿದೆ. ಅಲ್ಲದೇ ಆರೋಪಿ ಶಾರೀಕ್ ಚಿಕಿತ್ಸೆ ಪಡೆಯುತ್ತಿರುವ ಕೊಠಡಿಯ ಪ್ರವೇಶ ದ್ವಾರದ ಬಳಿ ಮೆಟಲ್ ಡಿಟೆಕ್ಟರ್ ಕೂಡಾ ಅಳವಡಿಸಲಾಗಿದೆ.

- Advertisement -

Latest News

error: Content is protected !!