- Advertisement -
![]()
- Advertisement -
ಬೆಂಗಳೂರು: ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಸೇರಿದಂತೆ ಮೂವರಿಗೆ ಬೆಂಗಳೂರು ವಿವಿ ಡಾಕ್ಟರೇಟ್ ಘೋಷಿಸಿದೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ.
ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಶೈಲಿಯಲ್ಲಿ ಕೊಡುಗೆ ನೀಡುತ್ತ ಬಂದಿರುವ ದ್ವಾರಕೀಶ್ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಜೊತೆಗೆ ಚಿತ್ರರಂಗದ ಹಲವರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
- Advertisement -


