Thursday, June 4, 2026
Homeಕರಾವಳಿಉಡುಪಿಉಡುಪಿ: ಕರಾವಳಿ ಭಾಗದ ಜನರು ಸದಾ ಜಾಗೃತರಾಗಿರಬೇಕು: ಪೇಜಾವರ ಶ್ರೀ

ಉಡುಪಿ: ಕರಾವಳಿ ಭಾಗದ ಜನರು ಸದಾ ಜಾಗೃತರಾಗಿರಬೇಕು: ಪೇಜಾವರ ಶ್ರೀ

- Advertisement -
- Advertisement -

ಉಡುಪಿ: ಪೇಜಾವರ ಶ್ರೀಗಳು ಕರಾವಳಿ ಜನರು ಸಂದೇಹಾಸ್ಪದ ಚಟುವಟಿಕೆ ಕಂಡ ಕೂಡಲೇ ಜಾಗೃತರಾಗಬೇಕು. ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಬೇಕು ಎಂದು ಪೇಜಾವರ ಶ್ರೀ ವಿಶ್ಚಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಶ್ರೀಗಳು, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ವೇಳೆ ಕರಾವಳಿಯಲ್ಲಿ ನಡೆಯುತ್ತಿರುವ ಉಗ್ರಕೃತ್ಯಗಳು ಗೊತ್ತಾಗಿವೆ. ಹೀಗಾಗಿ ಕರಾವಳಿ ಭಾಗದ ಜನರು ಸದಾ ಜಾಗೃತರಾಗಿರಬೇಕು ಎಂದು ಹೇಳಿದ್ದಾರೆ.

ಉತ್ಥಾನ ದ್ವಾದಶಿ ಬಳಿಕ ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವ, ನಾಗಮಂಡಲದಂತಹ ಹಲವಾರು ಉತ್ಸವ ನಡೆಯುತ್ತೆ. ಜನಸಂದಣಿ ಹೆಚ್ಚಿರುವ ಸಮಾರಂಭ ನಡೆಯುತ್ತೆ.ಇಂತಹ ಸ್ಥಳಗಳಲ್ಲಿ ಅನಾಹುತ ನಡೆದಲ್ಲಿ ಸಮಾಜಕ್ಕೆ ದೊಡ್ಡ ಹಾನಿ. ಪ್ರತಿಯೊಬ್ಬರೂ ಈ ಬಗ್ಗೆ ಸದಾ ಜಾಗೃತರಾಗಿಬೇಕು ಎಂದು ಶ್ರೀಗಳು ಎಚ್ಚರಿಸಿದ್ದಾರೆ.

- Advertisement -

Latest News

error: Content is protected !!