Thursday, June 4, 2026
Homeಕರಾವಳಿಬಂಟ್ವಾಳ: ಪಿಲಾತಬೆಟ್ಟು ಗ್ರಾಮದ ಇಬ್ಬರು ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಬಂಟ್ವಾಳ: ಪಿಲಾತಬೆಟ್ಟು ಗ್ರಾಮದ ಇಬ್ಬರು ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಬಂಟ್ವಾಳ: ಪಿಲಾತಬೆಟ್ಟು ಗ್ರಾಮದ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರು ಇಂದು ಬಿಸಿರೋಡಿನ ಪಕ್ಷದ ಕಚೇರಿಯಲ್ಲಿ  ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪಿಲಾತಬೆಟ್ಟು ಗ್ರಾಮದ ಕಾಂಗ್ರೆಸ್  ಕಾರ್ಯಕರ್ತರಾಗಿದ್ದು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಯಗೊಂಡಿದ್ಧ ಮನೋಜ್ ಕಾಡಬೆಟ್ಟು ಮತ್ತು ಗೀತಾ ನಾಯ್ಕ್  ಅವರನ್ನು, ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪಕ್ಷದ ಕಚೇರಿಯಲ್ಲಿ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಗೊಳಿಸಿದರು.

ಪಕ್ಷದ ಸಿದ್ದಾಂತ ಅವರ ಅಭಿವೃದ್ಧಿಯನ್ನು ಕಂಡು ಬಿಜೆಪಿ ಪಕ್ಷದ ಸೇರ್ಪಡೆ ಗೊಂಡಿದ್ದೇವೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿ. ಇತ್ತೀಚಿನ ದಿನಗಳಲ್ಲಿ ಬಿಜೆಪಿಯು ಪ್ರಬಲ ರಾಜಕೀಯ ಪಕ್ಷವಾಗಿ ಬೆಳೆದುನಿಂತಿದ್ದು, ಪ್ರಧಾನಿ ಮೋದಿಯವರ ನಾಯಕತ್ವದ ಅಡಿಯಲ್ಲಿ  ಬಿಜೆಪಿಯತ್ತ ಎಲ್ಲರೂ ಆಕರ್ಷಿತರಾಗಿ ಬೆಂಬಲ ನೀಡುತ್ತಿದ್ದಾರೆ‌ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಹರ್ಷಿಣಿ ಪುಷ್ಪಾನಂದ, ಗ್ರಾಮ‌ ಪಂಚಾಯತ್ ಸದಸ್ಯರಾದ ಯೋಗೇಂದ್ರ ಕುಮಂಗಿಲ, ಕಾಂತಪ್ಪ ಕರ್ಕೇರ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪುಷ್ಪಾನಂದ, ಪ್ರಮುಖರಾದ ಯೋಗೀಶ್, ಯಶೋಧರ ಕರ್ಬೆಟ್ಟು, ಸನತ್ ಕೊಳ್ನಾಡು, ಸುಕೇಶ್ ಚೌಟ, ವಸಂತ ಸಾಲಿಯಾನ್, ಜಯರಾಮ ಭಂಡಾರಿ, ಸುರೇಶ್ ಮೈರ,ವಿಜಯ ಅಮ್ಟಾಡಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!