Saturday, June 6, 2026
Homeಕರಾವಳಿಸುಳ್ಯದಲ್ಲಿ ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡ ಮುಸ್ಲಿಂ ಯುವಕರು

ಸುಳ್ಯದಲ್ಲಿ ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡ ಮುಸ್ಲಿಂ ಯುವಕರು

- Advertisement -
- Advertisement -

ಸುಳ್ಯ: ಕಾಂತಾರ ಸಿನಿಮಾ ನೋಡಲು ಸಿನಿಮಾ ಥಿಯೇಟರ್ ಗೆ ಬಂದ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕರು ತರಾಟೆಗೆತ್ತಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ ಘಟನೆ ನಡೆದಿದ್ದು, ಕಾಲೇಜು ತಪ್ಪಿಸಿ ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದಕ್ಕೆ ಯುವಕರು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಹಿಜಾಬ್ ಧರಿಸಿದ್ದ ಯುವತಿ ಮತ್ತು ಅದೇ ಸಮುದಾಯದ ಯುವಕ ಕಾಂತಾರ ಸಿನಿಮಾ ವೀಕ್ಷಣೆಗೆ ಥಿಯೇಟರ್ ಗೆ ಬಂದಿದ್ದ ಬಗ್ಗೆ ಮಾಹಿತಿ ಪಡೆದ ಯುವಕರು ತರಾಟೆಗೆ ತೆಗೆದುಕೊಂಡಿದ್ದಾರೆ.ವಾಹನ ಪಾರ್ಕಿಂಗ್ ಸ್ಥಳದಲ್ಲಿ ಸ್ಥಳೀಯ ‌ಕೆಲವು ಮುಸ್ಲಿಂ ಯುವಕರು ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಮುಸ್ಲಿಂ ಯುವಕರ ಎಚ್ಚರಿಕೆ ಬಳಿಕ ವಿದ್ಯಾರ್ಥಿಗಳು ಸ್ಥಳದಿಂದ ತೆರಳಿದ್ದಾರೆ.

- Advertisement -

Latest News

error: Content is protected !!