Tuesday, June 9, 2026
Homeಕರಾವಳಿಬಂಟ್ವಾಳ:ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕನಿಂದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಬಂಟ್ವಾಳ:ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕನಿಂದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

- Advertisement -
- Advertisement -

ಬಂಟ್ವಾಳ: ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕನೊಬ್ಬ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಾಲಕಿ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದು, ಬಾಲಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಸಂತ್ರಸ್ತೆ ಹತ್ತನೇ ತರಗತಿಯಲ್ಲಿ ಓದುತ್ತಿದ್ದಳು. ಆಕೆಗೆ ಇನ್ಸ್ಟಾ ಗ್ರಾಂನಲ್ಲಿ ಬಾಲಕನ ಪರಿಚಯವಾಗಿತ್ತು. ಪರಿಚಯ ಪ್ರೀತಿಗೆ ತಿರುಗಿದ್ದು ಬಾಲಕ ಆಗಾಗ ಸಂತ್ರಸ್ತೆಯ ಮನೆಗೆ ಭೇಟಿ ಕೊಡುತ್ತಿದ್ದನು. ಒಂದು ದಿನ ಬಾಲಕ ಸಂತ್ರಸ್ತೆಗೆ ಕರೆ ಮಾಡಿ ಸಂತ್ರಸ್ತೆಯ ಮನೆಗೆ ಬಂದಿದ್ದು, ಬಳಿಕ ಆಕೆ ಆತನ ಜೊತೆ ಸ್ಕೂಟರ್‌ನಲ್ಲಿ ತೆರಳಿದ್ದಾಳೆ ಎನ್ನಲಾಗಿದೆ. ಈ ವೇಳೆ ಬಾಲಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ಆಕೆಯನ್ನು ಮನೆಗೆ ಬಿಟ್ಟು ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಸಂತ್ರಸ್ತ ಬಾಲಕಿಯ ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ನೀಡಿದ ದೂರಿನಂತೆ, ಬಾಲಕನನ್ನು ಬಾಲನ್ಯಾಯ ಮಂಡಳಿಯ ಎದುರು ಹಾಜರುಪಡಿಸಿ, ರಿಮಾಂಡ್ ಹೋಂಗೆ ಕಳುಹಿಸಲಾಗಿದೆ.

- Advertisement -

Latest News

error: Content is protected !!