Friday, June 5, 2026
Homeಕರಾವಳಿಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಕ್ರೀಡೋತ್ಸವ ಉದ್ಘಾಟಿಸಿದ ಸಿಎಂ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಕ್ರೀಡೋತ್ಸವ ಉದ್ಘಾಟಿಸಿದ ಸಿಎಂ

- Advertisement -
- Advertisement -

ಬಂಟ್ವಾಳ: ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ನ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಉದ್ಘಾಟನೆಗೊಂಡಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟಿಸಿ ಶಾಲಾ ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಲಾ ಕೌಶಲ್ಯವನ್ನು ವೀಕ್ಷಣೆ ಮಾಡಿದರು.

ಸಮಾರಂಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಸಚಿವ ಎಸ್. ಅಂಗಾರ, ತೋಟಗಾರಿಕೆ ಸಚಿವ ಮುನಿರತ್ನ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಶ್ರೀರಾಮ ವಿದ್ಯಾಕೇಂದ್ರದ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಸಿಎಂ ಹಾಗೂ ಸಚಿವರು ಮಂಗಳೂರಿಗೆ ಆಗಮಿಸಿದ್ದರು.

- Advertisement -

Latest News

error: Content is protected !!