Wednesday, June 3, 2026
Homeಕರಾವಳಿಬಂಟ್ವಾಳ: ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿಯ ಬಂಧನ

ಬಂಟ್ವಾಳ: ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಮುನ್ನಿಮಾರು ನಿವಾಸಿ ನಾರಾಯಣ ಪೂಜಾರಿಯವರ ಪುತ್ರ ರಾಜೇಶ್ (40 ವ.) ಬಂಧಿತ ಆರೋಪಿ.

ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿ ಬಾಲಕೃಷ್ಣ ಶೆಟ್ಟಿಯವರ ಪತ್ನಿ ಶಾಲಿನಿ ಶೆಟ್ಟಿರವರು ಬಂಟ್ವಾಳ ತಾಲೂಕು ಇಡಿದು ಗ್ರಾಮದ ಮಿತ್ತೂರು ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಅವರ ಕುತ್ತಿಗೆಯಲ್ಲಿದ್ದ 20 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದ.

ಈ ಬಗ್ಗೆ ಶಾಲಿನಿಯವರು ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!