Wednesday, June 3, 2026
Homeತಾಜಾ ಸುದ್ದಿನಟ ಸುಶಾಂತ್ ಮೃತದೇಹ ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗ

ನಟ ಸುಶಾಂತ್ ಮೃತದೇಹ ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗ

- Advertisement -
- Advertisement -

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ. ಪ್ರಾಥಮಿಕ ವರದಿಯಲ್ಲಿ ಸುಶಾಂತ್ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಮೇಲ್ನೋಟಕ್ಕೆ ಸುಶಾಂತ್ ಅವರದ್ದು ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಬರಲಾಗಿದೆ.

ಡಾ.ಆರ್.ಎನ್.ಕೂರಪ್ ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಸುಶಾಂತ್ ದೇಹದಲ್ಲಿ ವಿಷಕಾರಕ ಅಂಶ ಇದೆಯೇ ಎಂಬುದನ್ನು ಪತ್ತೆ ಹಚ್ಚಲು ಹಚ್ಚಲು ದೇಹದ ಭಾಗಗಳನ್ನು ಜೆ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ.

ನಿನ್ನೆ ಬಾಂದ್ರಾದ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಶಾಂತ್ ಆತ್ಮಹತ್ಯೆ ಕುಟುಂಬ ಸದಸ್ಯರಿಗೆ ಮಾತ್ರವಲ್ಲದೇ ಎಲ್ಲರಿಗೂ ಬಿಗ್ ಶಾಕ್ ನೀಡಿತ್ತು. ಅಲ್ಲದೇ, ಸುಶಾಂತ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಹಲವರು ಆಗ್ರಹಿಸಿದ್ದಾರೆ.

ಇನ್ನು ಸುಶಾಂತ್ ಅವರ ಕುಟುಂಬವರ್ಗ ಪಾಟ್ನಾದಲ್ಲಿ ನೆಲೆಸಿದ್ದು, ಇಂದು ಮುಂಬೈಗೆ ಪ್ರಯಾಣ ಬೆಳೆಸಿದ್ದು, ಇಂದು ಸುಶಾಂತ್ ಅವರ ಅಂತ್ಯಸಂಸ್ಕಾರ ನಡೆಯಲಿದೆ.

- Advertisement -

Latest News

error: Content is protected !!