Thursday, June 4, 2026
Homeಕರಾವಳಿಮುಲ್ಕಿ: ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಮುಲ್ಕಿ: ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

- Advertisement -
- Advertisement -

ಮುಲ್ಕಿ: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವ್ಯೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಕೆರೆಕಾಡು ಎಂಬಲ್ಲಿ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಈ ಮೂವರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು, ಇದೀಗ ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

- Advertisement -

Latest News

error: Content is protected !!