Thursday, June 4, 2026
Homeತಾಜಾ ಸುದ್ದಿವಿಧಾನಸಭಾ ಚುನಾವಣೆಗೆ ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸಭಾ ಚುನಾವಣೆಗೆ ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

- Advertisement -
- Advertisement -

ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ.

JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 93 ಅಭ್ಯರ್ಥಿಗಳ ಮೊಲದ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು (ಡಿಸೆಂಬರ್ 19) ಬೆಂಗಳೂರಿನಲ್ಲಿ ಪ್ರಕಟಿಸಿದರು.

ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, 2023ರ ಚುನಾವಣೆಗೆ ಜೆಡಿಎಸ್ ಪಟ್ಟಿ ಬಿಡುಗಡೆ ಬಗ್ಗೆ ಹಲವರು ಪ್ರಶ್ನೆ ಕೇಳಿದ್ದರು. ಈ ಕಾರಣಕ್ಕೆ ಇಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

ಜಿ.ಟಿ.ದೇವೇಗೌಡರಿಗೆ ಚಾಮುಂಡೇಶ್ವರಿಯಲ್ಲಿ ಟಿಕೆಟ್ ಸಿಕ್ಕಿದರೆ ಹುಣಸೂರಿನಲ್ಲಿ ಜಿಟಿಡಿ ಪುತ್ರ ಹರೀಶ್ ಗೌಡಗೆ ಸಿಕ್ಕಿದೆ. ಚನ್ನಪಟ್ಟಣದಿಂದ ಎಚ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ, ರಾಮನಗರದಿಂದ ನಿಖಿಲ್ ಸ್ಪರ್ಧಿಸಲಿದ್ದಾರೆ.

ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದುಕೊಂಡು ಪಕ್ಷ ತೊರೆಯುವ ಚಿಂತನೆ ನಡೆಸಿರುವ ನಾಯಕರ ಕ್ಷೇತ್ರಗಳ ಟಿಕೆಟ್​ ಘೋಷಣೆಯಾಗಿಲ್ಲ. ಅರಸಿಕೆರೆ ಶಿವಲಿಂಗೇಗೌಡ, ಕಡೂರು ವೈಎಸ್‌ವಿ ದತ್ತಾ, ಅರಕಲಗೂಡು ಎಟಿ ರಾಮಸ್ವಾಮಿ ಅವರಿಗೆ ಫಸ್ಟ್ ಲಿಸ್ಟ್​ನಲ್ಲಿ ಟಿಕೆಟ್ ನೀಡಿಲ್ಲ.

- Advertisement -

Latest News

error: Content is protected !!