Wednesday, June 3, 2026
Homeಕರಾವಳಿಕರ್ನಾಟಕ ಪ್ರಾಂತ ರೈತ ಸಂಘದ ಮಾಜಿ ಅಧ್ಯಕ್ಷ ಪರಮೇಶ್ವರನ್ ನಾಯರ್ ನಿಧನ

ಕರ್ನಾಟಕ ಪ್ರಾಂತ ರೈತ ಸಂಘದ ಮಾಜಿ ಅಧ್ಯಕ್ಷ ಪರಮೇಶ್ವರನ್ ನಾಯರ್ ನಿಧನ

- Advertisement -
- Advertisement -

ಬೆಳ್ತಂಗಡಿ: ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)- ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಮಾಜಿ ಸದಸ್ಯ , ಕರ್ನಾಟಕ ಪ್ರಾಂತ ರೈತ ಸಂಘದ ಮಾಜಿ ಅಧ್ಯಕ್ಷ ಪರಮೇಶ್ವರನ್ ನಾಯರ್ (84) ಇಂದು ಸೋಮವಾರ ಬೆಳಗ್ಗೆ ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತಃ ಕೇರಳದವರಾಗಿದ್ದು , ಕಳೆದ 30 ವರ್ಷಗಳಿಂದ ಕಳೆಂಜ ಗ್ರಾಮದ ಕೋಡಿಕುಲತ್ ಎಂಬಲ್ಲಿ ವಿವಿಧ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡಿದ್ದರೂ , ಕೇರಳ ರಾಜ್ಯದ ಹಿರಿಯ ಕಮ್ಯೂನಿಸ್ಟ್‌ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದ ನಾಯರ್ ಅವರು ಅತ್ಯಂತ ಸರಳ ವ್ಯಕ್ತಿತ್ವದಿಂದ ಜನಸಾಮಾನ್ಯರ ಮೆಚ್ಚುಗೆ ಗಳಿಸಿದ್ದರು. ಅರಳಿ ಸೌಜನ್ಯ ನಗರದ ಭೂ ಹೋರಾಟ ಸೇರಿದಂತೆ ಹಲವಾರು ರೈತರ ಹೋರಾಟದ ನೇತೃತ್ವವನ್ನು ವಹಿಸಿದ್ದರು. ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಸಾಮಾನ್ಯರಿಗೆ ಅಚ್ಚುಕಟ್ಟಾಗಿ ತಿಳಿಸುತ್ತಾ , ಹೋರಾಟಕ್ಕೆ ಸಹಕಾರ ನೀಡುವಂತೆ ಪ್ರೇರಣೆ ನೀಡುತ್ತಿದ್ದರು. ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಆಳವಾದ ಅಧ್ಯಯನ ಮಾಡಿ , ಅದಕ್ಕೆ ಕಾರಣ ಮತ್ತು ಪರಿಹಾರವನ್ನು ಕಂಡುಹಿಡಿಯುತ್ತಿದ್ದರು. ಸಾವಿನಲ್ಲೂ ಸಾರ್ಥಕತೆ ಮೆರೆದ ಕಮ್ಯೂನಿಸ್ಟ್‌ ನಾಯಕ: ಪರಮೇಶ್ವರನ್ ನಾಯರ್ ಅವರು ಒಬ್ಬ ಸರಳ ವ್ಯಕ್ತಿತ್ವದ ಕಮ್ಯೂನಿಸ್ಟ್‌ ನಾಯಕ. ಸಾವಿನ ಮೊದಲೇ ತನ್ನ ಮೃತದೇಹವನ್ನು ಯಾವುದಾದರೂ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಗಾಗಿ ದಾನ ಮಾಡಬೇಕು ಎಂದು ಮಕ್ಕಳಲ್ಲಿ ತಿಳಿಸಿದ್ದರು. ಅವರ ಇಚ್ಛೆಯಂತೆ ಮೃತದೇಹದ ಅಂತಿಮ ದರ್ಶನದ ಬಳಿಕ ಸಂಜೆ ಮೃತದೇಹವನ್ನು ಮಂಗಳೂರಿನ ಫಾ. ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಗೆ ದಾನ ಮಾಡಲಾಗುತ್ತದೆ ಎಂದು ಸಿಪಿಐ(ಎಂ) ಪಕ್ಷದ ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯದರ್ಶಿ, ನ್ಯಾಯವಾದಿ ಶಿವಕುಮಾರ್ ಎಸ್. ಎಂ ತಿಳಿಸಿದ್ದಾರೆ. ಮೃತರು ಪತ್ನಿ ಮಲ್ಲಿಕಾ , ಮಗ ಮಧುಸೂದನ್ , ಮಗಳು ಸೂರ್ಯಗಾಯತ್ರಿ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ

- Advertisement -

Latest News

error: Content is protected !!