- Advertisement -
![]()
- Advertisement -
ಉಪ್ಪಿನಂಗಡಿ : ಖಾಸಗಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರು-ಮಂಗಳೂರು ನಡುವೆ ಕೌಕ್ರಾಡಿ ಗ್ರಾಮದ ಲಾವತಡ್ಕ ಕೋರಮೇಲು ಎಂಬಲ್ಲಿ ಸೋಮವಾರ ನಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ 13ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಖಾಸಗಿ ಬಸ್ ಮದ್ದೂರು ಕಡೆಯಿಂದ ಧರ್ಮಸ್ಥಳಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ ಎನ್ನಲಾಗಿದೆ.
- Advertisement -


