Wednesday, June 3, 2026
Homeತಾಜಾ ಸುದ್ದಿಜಮ್ಮು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ : ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಈ ಭಯೋತ್ಪಾದಕರನ್ನ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನಿಷೇಧಿತ ಉಗ್ರ ಎಲ್‌ಇಟಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಮೂವರು ಉಗ್ರರನ್ನ ಹತ್ಯೆ ಮಾಡಲಾಗಿದ್ದು, ಗುರುತು ಪತ್ತೆ ಹಚ್ಚಲಾಗುತ್ತಿದೆ. ಹೆಚ್ಚಿನ ವಿವರಗಳನ್ನ ತಿಳಿಸಲಾಗುವುದು’ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಸೇನೆ ಮತ್ತು ಪೊಲೀಸ್ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಕನಿಷ್ಠ ಮೂವರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗ್ತಿದೆ.

- Advertisement -

Latest News

error: Content is protected !!