Thursday, July 23, 2026
Homeಕರಾವಳಿಕಡಬ: ಅತ್ತೆ ಹಾಗೂ ಅತ್ತಿಗೆಯಿಂದ ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಆಸ್ಪತ್ರೆಗೆ ದಾಖಲು

ಕಡಬ: ಅತ್ತೆ ಹಾಗೂ ಅತ್ತಿಗೆಯಿಂದ ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಆಸ್ಪತ್ರೆಗೆ ದಾಖಲು

- Advertisement -
- Advertisement -

ಕಡಬ: ಅತ್ತೆ ಹಾಗೂ ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಕಡಬ ತಾಲೂಕಿನ  ಬೆಳಂದೂರಿನಲ್ಲಿ ನಡೆದಿದೆ.

ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಮೈ ನಿವಾಸಿ ಕುಲದೀಪ್ ಅವರ ಪತ್ನಿ ಸರಸ್ವತಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಮಹಿಳೆ. ನಿನ್ನೆ ಮನೆಯಲ್ಲಿ ಗಲಾಟೆ ನಡೆದಿತ್ತು ಎನ್ನಲಾಗಿದ್ದು ಆ ಬಳಿಕ ಗಂಡ ಹೆಂಡತಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!