Saturday, June 6, 2026
Homeಕರಾವಳಿಉಡುಪಿಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಭೇಟಿ

- Advertisement -
- Advertisement -

ಉಡುಪಿ: ಕೇಂದ್ರ ಕ್ರೀಡಾ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಅವರು ಕೂಡಾ ಕೇಂದ್ರ ಸಚಿವರ ಜೊತೆ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಇದಕ್ಕೂ ಮುನ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಸಚಿವ ನಾರಾಯಣ ಗೌಡ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಉಡುಪಿಯ ಅಜ್ಜರಕಾಡಿನಲ್ಲಿ ನಿರ್ಮಿಸಲಾಗಿರುವ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವ ಠಾಕೂರ್ ಉಡುಪಿಗೆ ಆಗಮಿಸಿದ್ದರು.

- Advertisement -

Latest News

error: Content is protected !!