Saturday, June 6, 2026
Homeಕರಾವಳಿ25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹೇಮಾವತಿ ವಿ ಹೆಗ್ಗಡೆ ಆಯ್ಕೆ

25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹೇಮಾವತಿ ವಿ ಹೆಗ್ಗಡೆ ಆಯ್ಕೆ

- Advertisement -
- Advertisement -

ಮಂಗಳೂರು: 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹೇಮಾವತಿ ವಿ ಹೆಗ್ಗಡೆ ಆಯ್ಕೆಯಾಗಿದ್ದಾರೆ.ಉಜಿರೆಯಲ್ಲಿ ಫೆ.3ರಿಂದ 5ರವರೆಗೆ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ| ಎಂ. ಪಿ.ಶ್ರೀನಾಥ ಅವರು ತಿಳಿಸಿದ್ದಾರೆ.

ಹೇಮಾವತಿ ವಿ. ಹೆಗ್ಗಡೆ ಅವರು ರಾಜ್ಯದ ಲಕ್ಷಾಂತರ ಗ್ರಾಮೀಣ ಮಹಿಳೆಯರಿಗೆ ಸ್ಪೂರ್ತಿಯಾಗಿದ್ದಾರೆ. ಅವರ ದೂರದೃಷ್ಟಿ ಆಲೋಚನೆಗಳು ಮತ್ತು ಚಿಂತನೆಗಳು ರಾಜ್ಯಾದ್ಯಂತ ವಿವಿಧ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದ ಗ್ರಾಮೀಣ ಮಹಿಳೆಯರ ಜೀವನದಲ್ಲಿ ಸಮಗ್ರವಾದ ಸಬಲೀಕರಣವನ್ನುಂಟು ಮಾಡಿದೆ ಎಂದು ಅವರು ಇದೇ ವೇಳೆ ತಿಳಿಸಿದ್ರು.

- Advertisement -

Latest News

error: Content is protected !!