Sunday, June 7, 2026
Homeಕರಾವಳಿಉಡುಪಿಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ್ದ ಶಿಕ್ಷಕ ಅಮಾನತು

ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ್ದ ಶಿಕ್ಷಕ ಅಮಾನತು

- Advertisement -
- Advertisement -

ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್‌ ಅವರನ್ನು ಡಿಡಿಪಿಐ ಗಣಪತಿ ಕೆ. ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ ಎಂದು ವರದಿಯಾಗಿದೆ.

ಶಿಕ್ಷಕನ ವೀಡಿಯೋ ಎಲ್ಲೆಡೆ ವೈರಲ್‌ ಆಗಿದ್ದು, ಶಿಕ್ಷಕನನ್ನು ಕೂಡಲೇ ಅಮಾನತು ಮಾಡುವಂತೆ ಹಲವರು ಆಗ್ರಹಿಸಿದ್ರು. ಇನ್ನು ಶಿಕ್ಷಕರು ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ಕರ್ತವ್ಯದಿಂದ ಅಮಾನತುಗೊಳಿಸಿರುವುದಾಗಿ ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!