Sunday, June 14, 2026
Homeಕರಾವಳಿಮಂಗಳೂರು; ಭದ್ರತಾ ಸಿಬ್ಬಂದಿಯೊಬ್ಬರ ಮೃತದೇಹ ಚರಂಡಿಯಲ್ಲಿ ಪತ್ತೆ

ಮಂಗಳೂರು; ಭದ್ರತಾ ಸಿಬ್ಬಂದಿಯೊಬ್ಬರ ಮೃತದೇಹ ಚರಂಡಿಯಲ್ಲಿ ಪತ್ತೆ

- Advertisement -
- Advertisement -

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯ ಭದ್ರತಾ ಸಿಬ್ಬಂದಿಯೊಬ್ಬರ ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನ ಚರಂಡಿಯಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.

ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ ( 45) ಮೃತ ವ್ಯಕ್ತಿ. ಇವರು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಡಿ.27 ರಿಂದ ಕರ್ತವ್ಯಕ್ಕೆ ಹಾಜರಾಗದ ಅವರ ಮೃತದೇಹ ಕುತ್ತಾರು ಜಂಕ್ಷನ್ ನಲ್ಲಿರುವ ಚರಂಡಿಯಲ್ಲಿ ಪತ್ತೆಯಾಗಿದೆ.

ಮೃತ ಗಣೇಶ್ ಅವರು ದೇರಳಕಟ್ಟೆಯ ಬೆಳ್ಮ ಭಾಗದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗುವಿನ ಜತೆಗೆ ವಾಸವಾಗಿದ್ದರು. ಪತ್ನಿ ಸರಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!