Tuesday, June 9, 2026
Homeಕರಾವಳಿಧರ್ಮಸ್ಥಳ : ಕಾಣೆಯಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಧರ್ಮಸ್ಥಳ : ಕಾಣೆಯಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಳ್ತಂಗಡಿ : ವಾರದ ಹಿಂದೆ ಮನೆಯಿಂದ  ಕಾಣೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ವಿಜಯನ್(54) ಎಂಬವರು ಡಿ.23 ರಂದು ಮನೆಯಿಂದ ಕಾಣೆಯಾಗಿದ್ದು ಬಳಿಕ ಮನೆಯವರು ಸಾಕಷ್ಟು ಹುಡುಕಾಟ ನಡೆಸಿದರು ಪತ್ತೆಯಾಗಿರಲಿಲ್ಲ.

ಮನೆ ಸಮೀಪದ ಕಾಡಿನಲ್ಲಿ ಮೃತದೇಹ ಡಿ.30 ರಂದು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವೊಂದು ಇರುವುದನ್ನು ಸ್ಥಳೀಯರು ನೋಡಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸರು ಹಾಗೂ ಮನೆಯವರು ಬಂದು ಪರಿಶೀಲನೆ ನಡೆಸಿದಾಗ ಇದು ನಾಪತ್ತೆಯಾಗಿದ್ದ ವಿಜಯಾನ್ ಮೃತದೇಹ ಎಂಬುದು ದೃಢಪಟ್ಟಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತರ ಪತ್ನಿ ದೂರು ನೀಡಿದ್ದು. ಅದರಂತೆ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!