Saturday, June 6, 2026
Homeಕರಾವಳಿಆತ್ಮಹತ್ಯೆಗೆ ಯತ್ನಿಸಿದ್ದ ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೆನಾಲ ಆಸ್ಪತ್ರೆಯಲ್ಲಿ ಸಾವು

ಆತ್ಮಹತ್ಯೆಗೆ ಯತ್ನಿಸಿದ್ದ ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೆನಾಲ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಸುಳ್ಯ; ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸುಳ್ಯದ ಕಾಂಗ್ರೆಸ್ ನಾಯಕ ಸುಧೀರ್ ರೈ ಮೇನಾಲ(48) ಅವರು ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೂರು ದಿನಗಳ ಹಿಂದೆ ಅಜ್ಜಾವರ ತೆರಳುವ ಮಾರ್ಗ ಮಧ್ಯೆ ವಿಷ ಸೇವನೆ ಮಾಡಿ ಮನೆಗೆ ಹೋಗಿದ್ದರು. ವಿಷ ಸೇವಿಸಿದ ವಿಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದೆರಡು ದಿನಗಳಿಂದ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.

ಸುಳ್ಯ ಕಾಂಗ್ರೆಸ್ ನ ಸಕ್ರಿಯ ನಾಯಕರಲ್ಲಿ ಒಬ್ಬರಾಗಿದ್ದ ಅವರು ರಾಜಕೀಯ ಸೇರಿದಂತೆ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹೆಸರು ಗಳಿಸಿದ್ದರು. ಪಕ್ಷಾತೀತವಾಗಿ ಅಪಾರ ಸ್ನೇಹಿತವರ್ಗವನ್ನೇ ಹೊಂದಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಚೇತರಿಸಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಹಾಗೂ ಪುತ್ರ, ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Latest News

error: Content is protected !!