Tuesday, June 9, 2026
Homeಕರಾವಳಿವಿಟ್ಲ: ಶಾಲೆಗೆ ತೆರಳಲು ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್‌ ಡಿಕ್ಕಿ

ವಿಟ್ಲ: ಶಾಲೆಗೆ ತೆರಳಲು ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್‌ ಡಿಕ್ಕಿ

- Advertisement -
- Advertisement -

ವಿಟ್ಲ : ಐದು ವರ್ಷದ ಬಾಲಕಿಗೆ ಬೈಕ್‌ ಡಿಕ್ಕಿ ಹೊಡೆದ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ(5) ಗಾಯಗೊಂಡ ವಿದ್ಯಾರ್ಥಿನಿ. ಈಕೆ ಶಾಲೆಗೆ ತೆರಳಲು ರಸ್ತೆ ಬದಿ ನಿಂತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ.  ತೀವ್ರ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!