Sunday, June 7, 2026
Homeತಾಜಾ ಸುದ್ದಿಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ಮಾಡಿದ ವ್ಯಕ್ತಿ

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ಮಾಡಿದ ವ್ಯಕ್ತಿ

- Advertisement -
- Advertisement -

ನವದೆಹಲಿ : ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿಜ ಘಟನೆ ಏರ್ ಇಂಡಿಯಾ ವಿಮಾನದಲ್ಲಿ ನವೆಂಬರ್ 26 ರಂದು ನಡೆದಿದ್ದು ಬೆಳಕಿಗೆ ಬಂದಿದೆ. ಸದ್ಯ  ಪ್ರಯಾಣಿಕನನ್ನು ವಿಮಾನ ಪ್ರಯಾಣದಿಂದ ನಿಷೇಧ ಹೇರಲಾಗಿದೆ.

2022ರ ನವೆಂಬರ್‌ 26 ರಂದು ಈ ಘಟನೆ ನಡೆದಿದ್ದು ಏರ್ ಇಂಡಿಯಾ ವಿಮಾನವು ನ್ಯೂಯಾರ್ಕ್ ನಿಂದ ದೆಹಲಿಗೆ ಬರುತ್ತಿದ್ದು, ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಪ್ಯಾಂಟ್‌ನ ಜಿಪ್‌ ತೆಗೆದು 70 ವರ್ಷದ ವಯಸ್ಸಿನ ಮಹಿಳೆ ಮೇಲೆ ಮೂತ್ರ ಮಾಡಿದ್ದಾನೆ. ಮದ್ಯದ ಅಮಲಿನಲ್ಲಿ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಮಧ್ಯಾಹ್ನದ ಭೋಜನದ ಬಳಿಕ ವಿಮಾನದ ಲೈಟ್‌ಗಳನ್ನು ಡಿಮ್‌ ಮಾಡಲಾಗಿತ್ತು. ಈ ವೇಳೆ ವ್ಯಕ್ತಿ ಮಹಿಳೆಯ ಮೇಲೆ ಮೂತ್ರ ಮಾಡಿದ್ದಾನೆ.

ಇನ್ನೊಬ್ಬರು ಪ್ರಯಾಣಿಕ ಹೇಳಿದ ಬಳಿಕ ಅಲ್ಲಿಂದ ಈ ವ್ಯಕ್ತಿ ತೆರಳಿದ್ದಾನೆ. ಘಟನೆಯ ಬಗ್ಗೆ ಮಹಿಳೆ ವಿಮಾನ ಸಿಬ್ಬಂದಿಗೆ ದೂರು ನೀಡಿದ್ದು, ತನ್ನ ಬಟ್ಟೆ, ಬ್ಯಾಗು, ಶೂ ಮೂತ್ರದಿಂದ ಒದ್ದೆಯಾಗಿದೆ ಎಂದು ತಿಳಿಸಿದ್ದಾರೆ. ಬಳಿಕ ವಿಮಾನ ಸಿಬ್ಬಂದಿ ಬೇರೆ ಬಟ್ಟೆ ಹಾಗೂ ಚಪ್ಪಲಿ ನೀಡಿದ್ದಾರೆ. ಘಟನೆಯ ಬಗ್ಗೆ ಮಹಿಳೆ ಟಾಟಾ ಗ್ರೂಪ್‌ನ ಮುಖ್ಯಸ್ಥ ಎನ್. ಚಂದ್ರಶೇಖರ್ ಅವರಿಗೆ ಇ–ಮೇಲ್‌ ಮೂಲಕ ದೂರು ನೀಡಿದ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ.

- Advertisement -

Latest News

error: Content is protected !!