Saturday, June 6, 2026
Homeಕರಾವಳಿಬೆಳ್ತಂಗಡಿ: ಬಂದಾರು ಗ್ರಾಮ ಪಂಚಾಯತ್ ಮಹಿಳೆಯರ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬಂದಾರು ಗ್ರಾಮ ಪಂಚಾಯತ್ ಮಹಿಳೆಯರ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

- Advertisement -
- Advertisement -

ಬೆಳ್ತಂಗಡಿ: ಮಂಗಳೂರಿನ ಮಂಗಳಾ ಕ್ರೀಡಾಂಗದಲ್ಲಿ ನಡೆದ 75ನೇ ಸ್ವಾತಂತ್ರ್ಯದ ಅಮೃತಮಹೋತ್ಸದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಯುವ  ಸಬಲೀಕರಣ ಮತ್ತು  ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ 2022-23 ಸಾಲಿನ ಮಹಿಳೆಯರ ಖೋ ಖೋ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯತ್ ತಂಡ ಮಂಗಳೂರು ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ಈ ಸಂದರ್ಭದಲ್ಲಿ ಬಂದಾರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ,ಬಂದಾರು ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಕರಾದ ಪ್ರಶಾಂತ್, ಬಂದಾರು ಗ್ರಾ.ಪಂ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಶ್ರೀಮತಿ ವಿಮಲ, ಕೃಷ್ಣ ಕುಲಾಲ್ ಶ್ರೀರಾಮ ನಗರ,ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ,ಪ್ರಶಾಂತ ಗೌಡ ನಿರುಂಬುಡ,ಗ್ರಾ.ಪಂ ಸಿಬ್ಬಂದಿ ಮೋಹನ್ ಬಂಗೇರ ಮೈರೋಳ್ತಡ್ಕ ಉಪಸ್ಥಿತರಿದ್ದರು.

- Advertisement -

Latest News

error: Content is protected !!