Sunday, June 7, 2026
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಕ್ತ ನ್ಯಾಯಮೂರ್ತಿ ಆಗಮನ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಕ್ತ ನ್ಯಾಯಮೂರ್ತಿ ಆಗಮನ

- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಲೋಕಾಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ,ಪತ್ನಿ ಶೋಭಾ ಪಾಟೀಲ್ ಆಗಮಿಸಿದ್ದಾರೆ. ಇಂದು ಧರ್ಮಸ್ಥಳ ಸನ್ನಿಧಿ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದು ನಾಳೆ ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

ಲೋಕಾಯಕ್ತ ನ್ಯಾಯಮೂರ್ತಿ ಆಗಮಿಸುವ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ , ಕಂದಾಯ ನಿರೀಕ್ಷಕ ಪ್ರತೀಷ್, ಧರ್ಮಸ್ಥಳ ಗ್ರಾಮ ಆಡಳಿತ ಅಧಿಕಾರಿ ಪ್ರದೀಪ್ ಕುಮಾರ್, ಧರ್ಮಸ್ಥಳದ ಮ್ಯಾನೇಜರ್ ಪಾರ್ಶ್ವನಾಥ್, ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್  ಅನಿಲ್ ಕುಮರ್ ಡಿ ಮತ್ತು ತಂಡ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಲೋಕಾಯಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ತಂಡದವರು ಉಪಸ್ಥಿತಿಯಿದ್ದು ಸ್ವಾಗತಿಸಿದರು.

- Advertisement -

Latest News

error: Content is protected !!